Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:9 - ಕನ್ನಡ ಸತ್ಯವೇದವು J.V. (BSI)

9 ಮತ್ತು ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ಯರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನ ಮಾಡಬೇಕು. ಅದು ಹೊಲೆಗಳೆವ ನೀರನ್ನು ಸಿದ್ಧಪಡಿಸುವದಕ್ಕಾಗಿ ಅಲ್ಲೇ ಇಟ್ಟಿರಬೇಕು; ಅದು ದೋಷಪರಿಹಾರಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಯೇಲ್ ಸಮಾಜದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಅದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇಸ್ರೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಆ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:9
16 ತಿಳಿವುಗಳ ಹೋಲಿಕೆ  

ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು.


ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗಂದರೆ - ನೀನು ಅವರ ಮೇಲೆ ದೋಷಪರಿಹಾರಕಜಲವನ್ನು ಚಿವಿುಕಿಸಬೇಕು; ಅವರು ಸರ್ವಾಂಗಕ್ಷೌರಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಬೇಕು.


ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು.


ಅವಳು ಮುಟ್ಟಾಗಿರುವಾಗ ಯಾವದರ ಮೇಲೆ ಮಲಗಿದರೂ ಕೂತುಕೊಂಡರೂ ಅದು ಅಶುದ್ಧವಾಗಿರುವದು.


ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡುಹೋಗಿ ತನಗೆ ಎದುರಾಗಿಯೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.


ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ಅಂಥ ಅಶುದ್ಧನಾದವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು ಅದರ ಮೇಲೆ ಸೆಲೇನೀರನ್ನು ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು