ಅರಣ್ಯಕಾಂಡ 2:2 - ಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರೆಲ್ಲರೂ ದೇವದರ್ಶನದ ಗುಡಾರದ ಸುತ್ತಲು ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನ ತನ್ನ ಗೋತ್ರಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.” ಅಧ್ಯಾಯವನ್ನು ನೋಡಿ |
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.