Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:3 - ಕನ್ನಡ ಸತ್ಯವೇದವು J.V. (BSI)

3 ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:3
19 ತಿಳಿವುಗಳ ಹೋಲಿಕೆ  

ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮೀನಾದಾಬನು ಯೆಹೂದಕುಲ ಪ್ರಭುವಾದ ನಹಶೋನನನ್ನು ಪಡೆದನು;


ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು.


ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,


ಹೆಚ್ರೋನನು ಅರಾಮನನ್ನು ಪಡೆದನು. ಅರಾಮನು ಅಮ್ಮೀನಾದಾಬನನ್ನು ಪಡೆದನು. ಅಮ್ಮೀನಾದಾಬನು ನಹಶೋನನನ್ನು ಪಡೆದನು. ನಹಶೋನನು ಸಲ್ಮೋನನನ್ನು ಪಡೆದನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಅಮ್ಮೀನಾದಾಬನ ಮಗನಾದ ನಹಶೋನನು ಕೊಟ್ಟ ಕಾಣಿಕೆ.


ಮೊದಲನೆಯ ದಿನದಲ್ಲಿ ಕಾಣಿಕೆ ತಂದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು.


ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.


ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 74,600 ಮಂದಿ.


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ನಿಮಗೆ ಸಹಾಯಕರಾಗಿರಬೇಕಾದವರು ಯಾರಾರಂದರೆ - ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,


ನೀನು ಆರ್ಭಟವಾಗಿ ಊದಿಸುವಾಗ ಮೂಡಣ ದಿಕ್ಕಿನ ದಂಡುಗಳು ಹೊರಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು