ಅರಣ್ಯಕಾಂಡ 2:34 - ಕನ್ನಡ ಸತ್ಯವೇದವು J.V. (BSI)34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು. ಅಧ್ಯಾಯವನ್ನು ನೋಡಿ |