Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:11 - ಕನ್ನಡ ಸತ್ಯವೇದವು J.V. (BSI)

11 ಕೈಯೆತ್ತಿ ತನ್ನ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು; ಸಮೂಹದವರೂ ಅವರ ಪಶುಗಳೂ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:11
24 ತಿಳಿವುಗಳ ಹೋಲಿಕೆ  

ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ -


ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಅರಣ್ಯದಲ್ಲಿ, ಘೋರ ಮರುಭೂವಿುಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.


ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ ನದಿಗಳಾಗಿ ಹರಿಯಮಾಡಿದನು.


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ


ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.


ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.


ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ.


ಆತನು ಬಂಡೆಯನ್ನು ಸೀಳಲು ನೀರು ಚಿವ್ಮಿು ಬಂದು ಅರಣ್ಯದಲ್ಲಿ ನದಿಯಾಗಿ ಹರಿಯಿತು.


ಆತನು ಬಂಡೆಯನ್ನು ಕೆರೆಯನ್ನಾಗಿಯೂ ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಆತನು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಕುಡಿದು ಪುನಃ ಚೈತನ್ಯ ಹೊಂದಿದನು. ಆದದರಿಂದ ಅದಕ್ಕೆ ಏನ್‍ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು