Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:14 - ಕನ್ನಡ ಸತ್ಯವೇದವು J.V. (BSI)

14 ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:14
20 ತಿಳಿವುಗಳ ಹೋಲಿಕೆ  

ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ಬಂಧುಜನಗಳು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ಅದಕ್ಕೆ ಅವರು - ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮಮಹತ್ತಿನ ನಿವಿುತ್ತ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಆತನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನೂ


ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ


ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.


ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ


ಆಗ ಇಸ್ರಾಯೇಲ್ಯರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.


ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿಬಿಟ್ಟದ್ದನ್ನೂ ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಿರ್ಮೂಲ ಮಾಡಿದ್ದನ್ನೂ ಕೇಳಿ


ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಮಾಡಿದ್ದೆಲ್ಲವನ್ನೂ ಕೇಳಿ -


ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.


ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು; ಅದಕ್ಕೆ ಏಸಾವ ಎಂದು ಹೆಸರಿಟ್ಟರು.


ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು.


ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು