Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:16 - ಕನ್ನಡ ಸತ್ಯವೇದವು J.V. (BSI)

16 ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:16
14 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ಐಗುಪ್ತ್ಯರು ದಾಸರನ್ನಾಗಿ ಮಾಡಿಕೊಂಡಿರುವ ಇಸ್ರಾಯೇಲ್ಯರ ಗೋಳು ಈಗ ನನಗೆ ಕೇಳಿಸಿತು.


ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ


ನಿನ್ನ ದೇಶವನ್ನು ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷೇತೋಟಗಳಲ್ಲಿಯಾಗಲಿ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು ಎಂದು ಹೇಳಿಸಿದರು.


ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.


ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು