ಅರಣ್ಯಕಾಂಡ 20:17 - ಕನ್ನಡ ಸತ್ಯವೇದವು J.V. (BSI)17 ತಮ್ಮ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿ ಯಾದರೂ ದ್ರಾಕ್ಷೇತೋಟಗಳಲ್ಲಿಯಾದರೂ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ರಾಜ ಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟಿದ ತನಕ ಬಲಕ್ಕೂ ಎಡಕ್ಕೂ ತಿರುಗುವದಿಲ್ಲ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿ |
ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.