Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:22 - ಕನ್ನಡ ಸತ್ಯವೇದವು J.V. (BSI)

22 ಆಗ ಇಸ್ರಾಯೇಲ್ಯರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲ್ ಇಡೀ ಸಮಾಜದವರು ಕಾದೇಶಿನಿಂದ ಹೊರಟು ‘ಹೋರ್’ ಎಂಬ ಬೆಟ್ಟಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರೆಲ್ಲರೂ ಕಾದೇಶಿನಿಂದ ಹೊರಟು ಹೋರ್ ಬೆಟ್ಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರ ಸಮಸ್ತ ಸಮೂಹದವರು ಕಾದೇಶಿನಿಂದ ಪ್ರಯಾಣಮಾಡಿ, ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:22
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.


ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.


ಗಾದಿನ ತೆಂಕಣ ಸರಹದ್ದಿನಲ್ಲಿ ದೇಶದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್‍ಕಾದೇಶಿನ ಹಳ್ಳವನ್ನು ದಾಟಿ [ಐಗುಪ್ತದ ಮುಂದಣ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವದು.


ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು.


ಉತ್ತರದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ ಹೋರ್ ಎಂಬ ಪರ್ವತಕ್ಕೂ


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.


ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು