ಅರಣ್ಯಕಾಂಡ 20:26 - ಕನ್ನಡ ಸತ್ಯವೇದವು J.V. (BSI)26 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು ಎಂದು ಆಜ್ಞಾ ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿ ಆರೋನನ ಯಾಜಕ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಜರ ಬಳಿ ಸೇರಲಿ,” ಎಂದು ವಿಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆರೋನನ ವಸ್ತ್ರಗಳನ್ನು ತೆಗೆದು, ಅವುಗಳನ್ನು ಅವನ ಮಗ ಎಲಿಯಾಜರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು,” ಎಂದರು. ಅಧ್ಯಾಯವನ್ನು ನೋಡಿ |