ಅರಣ್ಯಕಾಂಡ 20:28 - ಕನ್ನಡ ಸತ್ಯವೇದವು J.V. (BSI)28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದುಬಿಟ್ಟು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದುಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮೋಶೆಯು ಆರೋನನ ಪ್ರತಿಷ್ಠಿತಾ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು. ಅಧ್ಯಾಯವನ್ನು ನೋಡಿ |