Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:4 - ಕನ್ನಡ ಸತ್ಯವೇದವು J.V. (BSI)

4 ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:4
13 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ಐಗುಪ್ತದಲ್ಲಿ ಮಹತ್ತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ಐಗುಪ್ತದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸವತೆಕಾಯಿ, ಕರ್ಬೂಜು, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವಲ್ಲಾ;


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು