Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:1 - ಕನ್ನಡ ಸತ್ಯವೇದವು J.V. (BSI)

1 ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಅತಾರೀಮ್ ಮಾರ್ಗವಾಗಿ ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ನೆಗೇಬಿನಲ್ಲಿ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅವನು ಇಸ್ರಯೇಲರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್‌ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:1
10 ತಿಳಿವುಗಳ ಹೋಲಿಕೆ  

ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.


ಹೊರ್ಮದ ಅರಸನು 1; ಅರಾದಿನ ಅರಸನು 1;


ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು.


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವದಕ್ಕೆ ಯಹಜಿಗೆ ಹೊರಟುಬರಲಾಗಿ


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು