Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:13 - ಕನ್ನಡ ಸತ್ಯವೇದವು J.V. (BSI)

13 ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೇ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆ ಅಮೋರಿಯರ ಪ್ರದೇಶದಿಂದಾಚೆ ಇರುವ ಮರುಭೂಮಿಯಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋಬಾಬ್ಯರ ಎಲ್ಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:13
8 ತಿಳಿವುಗಳ ಹೋಲಿಕೆ  

ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್ ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.


ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವದಕ್ಕಾಗಿ ತನ್ನ ದೇಶದ ಮೇರೆಯಾದ ಅರ್ನೋನ್ ಹೊಳೆಯ ತೀರದಲ್ಲಿ ಇರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.


ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ಅರಿಚಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಊರುಗಳವರು ಅಲೆಯುವ ಪಕ್ಷಿಗಳಂತೆಯೂ ಗೂಡಿನಿಂದ ಚದರಿದ ಮರಿಗಳ ಹಾಗೂ ಆಗುವರು.


ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ.


ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ


ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್‍ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರುಷ ಕಾಲ. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರೂ ಸತ್ತು ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು