Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:15 - ಕನ್ನಡ ಸತ್ಯವೇದವು J.V. (BSI)

15 ಆರ್‍ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ [ದಾಟಿದ್ದಾಯಿತು] ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು’ ದಾಟಿದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆರ್ ವಸತಿ ಪ್ರದೇಶಕ್ಕೆ ನಡೆಸುವ ಮೋವಾಬಿನ ಗಡಿಯ ಉದ್ದಕ್ಕೂ ಇರುವ ಕಣಿವೆಗಳನ್ನು ದಾಟಿದ್ದಾಯಿತು” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:15
6 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ - ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕೆಂದು ಆಜ್ಞಾಪಿಸಿದನು.


ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿಜ್ವಾಲೆಹೊರಟು ಮೋವಾಬ್ಯರ ರಾಜಧಾನಿಯಾದ ಆರ್ ಎಂಬಪಟ್ಟಣವನ್ನೂ ಅರ್ನೋನ್ ಹೊಳೆಯ ಬಳಿಯಲ್ಲಿರುವ ಪೂಜಾಸ್ಥಳಗಳ ದೇವತೆಗಳನ್ನೂ ದಹಿಸಿಬಿಟ್ಟಿತು.


ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.


ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.


ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು