Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:16 - ಕನ್ನಡ ಸತ್ಯವೇದವು J.V. (BSI)

16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಜನರನ್ನು ಕೂಡಿಸಿಕೋ, ನಾನು ಅವರಿಗೆ ಜಲಾಧಾರವನ್ನುಂಟುಮಾಡಿ ಕೊಡುವೆನು ಎಂದು ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:16
16 ತಿಳಿವುಗಳ ಹೋಲಿಕೆ  

ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ


ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಗೆ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದದರಿಂದ ಅವಳು ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಹುಡುಗನಿಗೆ ಕುಡಿಸಿದಳು.


ದೀಬೋನ್‍ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿವಿುನಲ್ಲಿ ಇಳಿದುಕೊಂಡರು.


ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿವಿುನವರೆಗೂ ಬೆಯೇರ್ ಏಲೀವಿುನ ಪರ್ಯಂತವೂ ವ್ಯಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು