Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:25 - ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್ಯರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಹೆಷ್ಬೋನಿನಲ್ಲೂ ಅದಕ್ಕೆ ಸೇರಿದ ಗ್ರಾಮಗಳಲ್ಲೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲೂ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರು ಅಮೋರಿಯರ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಷ್ಬೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:25
17 ತಿಳಿವುಗಳ ಹೋಲಿಕೆ  

[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,


ಸೊದೋಮ್, ಆಕೆಯ ಕುಮಾರ್ತೆಯರು, ಸಮಾರ್ಯ, ಆಕೆಯ ಕುಮಾರ್ತೆಯರು, ಇವರ ದುರವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರವಸ್ಥೆಯನ್ನೂ ತಪ್ಪಿಸುವೆನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಕೆನ್ನೆಯನ್ನೂ ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ.


ನಿನ್ನ ಕಂಠವು ದಂತದ ಗೋಪುರ; ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್‍ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ನಾಸಿಕವು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನ ಹಾಗಿದೆ.


ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲ್ಯರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.)


ಹೀಗೆ ಇಸ್ರಾಯೇಲ್ಯರಿಗೆ ಅಮ್ಮೋನಿಯರ ದೇಶದಲ್ಲಿ ನಿವಾಸವುಂಟಾಯಿತು.


ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.


ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಯೆಹೋವನು ಇಸ್ರಾಯೇಲ್ಯರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ದನಕುರಿಗಳ ಮೇವಿಗೆ ತಕ್ಕ ಪ್ರದೇಶ.


ನೀವು ಬಹುಕಾಲದವರೆಗೆ ಅರಣ್ಯದಲ್ಲಿದ್ದನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲಿ ಸಂಹರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು