Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:28 - ಕನ್ನಡ ಸತ್ಯವೇದವು J.V. (BSI)

28 ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿಜ್ವಾಲೆಹೊರಟು ಮೋವಾಬ್ಯರ ರಾಜಧಾನಿಯಾದ ಆರ್ ಎಂಬಪಟ್ಟಣವನ್ನೂ ಅರ್ನೋನ್ ಹೊಳೆಯ ಬಳಿಯಲ್ಲಿರುವ ಪೂಜಾಸ್ಥಳಗಳ ದೇವತೆಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೀಹೋನನಾ ಪಟ್ಟಣ, ಆ ಹೆಷ್ಬೋನ್, ಅಲ್ಲಿಂದಲೆ ಹೊರಟು ಬಂದಿತು ಅಗ್ನಿಜ್ವಾಲೆ. ದಹಿಸಿ ಬಿಟ್ಟಿತದು ಮೋವಾಬ್ಯರ ರಾಜಧಾನಿಯಾದ ಆರ್ ನಗರವನ್ನು, ಅರ್ನೋನ್ ಹೊಳೆಯ ಬಳಿಯ ಪೂಜಾಸ್ಥಳಗಳ ದೇವತೆಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:28
20 ತಿಳಿವುಗಳ ಹೋಲಿಕೆ  

ಆರ್‍ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ [ದಾಟಿದ್ದಾಯಿತು] ಎಂದು ಬರೆದದೆ.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.


ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವದು; ಭಟರು ಘೋಷಿಸಿ ಕೊಂಬೂದುವ ಯುದ್ಧ ಕೋಲಾಹಲದಲ್ಲಿ ಮೋವಾಬು ಸಾಯುವದು.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.


ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಅದರ ಅರಮನೆಗಳನ್ನು ನುಂಗಿಬಿಡುವದು.


ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಅರಮನೆಗಳನ್ನು ನುಂಗಿಬಿಡುವದು;


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು.


ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.


ಆಗ ಯೆಹೋವನು ನನಗೆ - ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕೆಂದು ಆಜ್ಞಾಪಿಸಿದನು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಕವಿಗಳು ಹೇಳಿದ ಪದ್ಯವು ಇದರ ವಿಷಯವಾದದ್ದೇ; ಅದೇನಂದರೆ - ಹೆಷ್ಬೋನಿಗೆ ಬಂದು ಅದನ್ನು [ಹೊಸತಾಗಿ] ಕಟ್ಟಬೇಕು; ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು;


ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರಿಗೆ ಶೋಭನವಾಗಲಿಲ್ಲ.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ.


ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.


ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು