ಅರಣ್ಯಕಾಂಡ 22:22 - ಕನ್ನಡ ಸತ್ಯವೇದವು J.V. (BSI)22 ಅವನು ಹೋದದರಿಂದ ದೇವರಿಗೆ ಕೋಪವುಂಟಾಯಿತು; ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಇಬ್ಬರು ಆಳುಗಳು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |