Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:31 - ಕನ್ನಡ ಸತ್ಯವೇದವು J.V. (BSI)

31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:31
14 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದದರಿಂದ ಅವಳು ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಹುಡುಗನಿಗೆ ಕುಡಿಸಿದಳು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಅವರು ಆತನ ಗುರುತನ್ನು ಹಿಡಿದರು; ಆತನು ಅವರ ಕಣ್ಣಿಗೆ ಮಾಯವಾದನು.


ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ; ಅವರ ಕಣ್ಣು ಕಟ್ಟಿದ ಹಾಗಾಯಿತು.


ಆತನು ಅವರಿಗೆ - ನಾನೇ ಅವನು ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲದ ಮೇಲೆ ಬಿದ್ದರು.


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ, ದೇವರ ಮಾತುಗಳನ್ನು ಕೇಳುವವನೂ ಪರಾತ್ಪರನ ಜ್ಞಾನವನ್ನು ಪಡೆದವನೂ ಪರವಶವಾಗಿ ಕಣ್ಣುತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನಿಗುಂಟಾದ ದೇವೋಕ್ತಿ.


ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಮೋಶೆ ತ್ವರೆಪಟ್ಟು ನೆಲದಲ್ಲಿ ಅಡ್ದಬಿದ್ದು ನಮಸ್ಕರಿಸಿ -


ಅದಕ್ಕೆ ಆ ಕತ್ತೆ - ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ; ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ ಅಂದಾಗ ಬಿಳಾಮನು ಇಲ್ಲವೆಂದನು.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು


ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು