ಅರಣ್ಯಕಾಂಡ 22:4 - ಕನ್ನಡ ಸತ್ಯವೇದವು J.V. (BSI)4 ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಅಧ್ಯಾಯವನ್ನು ನೋಡಿ |