Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:41 - ಕನ್ನಡ ಸತ್ಯವೇದವು J.V. (BSI)

41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:41
9 ತಿಳಿವುಗಳ ಹೋಲಿಕೆ  

ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು;


ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲ ಮಾಡುವೆನು. ಇದು ಯೆಹೋವನ ನುಡಿ.


ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು.


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿಜ್ವಾಲೆಹೊರಟು ಮೋವಾಬ್ಯರ ರಾಜಧಾನಿಯಾದ ಆರ್ ಎಂಬಪಟ್ಟಣವನ್ನೂ ಅರ್ನೋನ್ ಹೊಳೆಯ ಬಳಿಯಲ್ಲಿರುವ ಪೂಜಾಸ್ಥಳಗಳ ದೇವತೆಗಳನ್ನೂ ದಹಿಸಿಬಿಟ್ಟಿತು.


ಬಾಲಾಕನು ಹೋರಿಗಳನ್ನೂ ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.


ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.


ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು