Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:1 - ಕನ್ನಡ ಸತ್ಯವೇದವು J.V. (BSI)

1 ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:1
19 ತಿಳಿವುಗಳ ಹೋಲಿಕೆ  

ಆಗ ಬಿಳಾಮನು ಬಾಲಾಕನಿಗೆ - ಇಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸು ಎಂದು ಹೇಳಲಾಗಿ


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಯಜ್ಞಕ್ಕಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.


ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.


ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು.


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಏಳನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ ;


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯಜ್ಞಪೀಠದ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗ ಹೋಮವಾಗಿ ಸಮರ್ಪಿಸಿದಾಗ


ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು