Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:10 - ಕನ್ನಡ ಸತ್ಯವೇದವು J.V. (BSI)

10 ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವದಕ್ಕೆ ಯಾರಿಂದಾದೀತು; ಇಸ್ರಾಯೇಲ್ಯರ ಕಾಲ್ಭಾಗವನ್ನಾದರೂ ಯಾರು ಹೇಳಬಲ್ಲರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:10
20 ತಿಳಿವುಗಳ ಹೋಲಿಕೆ  

ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವದಿಲ್ಲ.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಹೀಗೆ ದಾನ್ ಕುಲದದಂಡಿಗೆ ಸೇರಿದವರೆಲ್ಲರೂ 157,600 ಮಂದಿ. ಇವರು ಕಡೇ ದಂಡಾಗಿ ಹೊರಡಬೇಕು.


ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದವರೆಲ್ಲರೂ 108,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.


ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರೂ 186,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದವರೆಲ್ಲರೂ 151,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು