Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:18 - ಕನ್ನಡ ಸತ್ಯವೇದವು J.V. (BSI)

18 ಬಾಲಾಕನು - ಯೆಹೋವನು ಏನು ಹೇಳಿದ್ದಾನೆ ಎಂದು ಅವನನ್ನು ಕೇಳಲು ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನೇ, ಕಿವಿಗೊಟ್ಟು ಕೇಳು; ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:18
3 ತಿಳಿವುಗಳ ಹೋಲಿಕೆ  

ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕೂತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ - ನಿನಗೆ ಹೇಳಬೇಕಾದದ್ದೊಂದು ದೇವೋಕ್ತಿಯಿದೆ ಅನ್ನಲು ಅವನು ತನ್ನ ಸಿಂಹಾಸನದಿಂದೆದ್ದನು.


ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು