ಅರಣ್ಯಕಾಂಡ 23:19 - ಕನ್ನಡ ಸತ್ಯವೇದವು J.V. (BSI)19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ? ಅಧ್ಯಾಯವನ್ನು ನೋಡಿ |