Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:21 - ಕನ್ನಡ ಸತ್ಯವೇದವು J.V. (BSI)

21 ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:21
49 ತಿಳಿವುಗಳ ಹೋಲಿಕೆ  

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಉತ್ಸಾಹಧ್ವನಿಯೂ ಜಯಘೋಷವೂ ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಇಸ್ರಾಯೇಲ್ಯರ ಅಧಿಪತಿಗಳು ಕುಲಗಳವರೊಡನೆ ಒಟ್ಟಾಗಿ ಕೂಡಿದಾಗ [ಯೆಹೋವನು] ತಾನೇ ಯೆಶುರೂನಿನಲ್ಲಿ ಅರಸನಾದನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.


ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ಯೆಹೋವನು ಹಗಲುಹೊತ್ತಿನಲ್ಲಿ ದಾರಿತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವರ ಮುಂಭಾಗದಲ್ಲಿ ಹೋದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;


ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.


ಯೆರೂಸಲೇವಿುನಲ್ಲಿ ವಾಸಿಸುವ ಯೆಹೋವನ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯಾಹುವಿಗೆ ಸ್ತೋತ್ರ!


ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿದ್ದೇನೆಂತಲೂ ಅದ್ವಿತೀಯನಾದ ನಾನೇ ನಿಮ್ಮ ದೇವರಾದ ಯೆಹೋವನಾಗಿದ್ದೇನೆಂತಲೂ ನಿಮಗೆ ನಿಶ್ಚಯವಾಗುವದು; ನನ್ನ ಜನರು ಎಂದಿಗೂ ಆಶಾಭಂಗಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು