Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:27 - ಕನ್ನಡ ಸತ್ಯವೇದವು J.V. (BSI)

27 ತರುವಾಯ ಬಾಲಾಕನು ಬಿಳಾಮನಿಗೆ - ಬೇರೊಂದು ಸ್ಥಳಕ್ಕೆ ನಿನ್ನನ್ನು ಕರಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವದಕ್ಕೆ ಒಂದು ವೇಳೆ ದೇವರು ಅನುಮತಿಸಾನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಬಳಿಕ ಬಾಲಾಕನು, “ಬಾ, ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದುಕೊಂಡು ಹೋಗುತ್ತೇನೆ. ಬಹುಶಃ ಅಲ್ಲಿಯಾದರು ನೀನು ಅವರನ್ನು ಶಪಿಸುವಂತೆ ದೇವರು ಅನುಮತಿಸಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದುವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:27
12 ತಿಳಿವುಗಳ ಹೋಲಿಕೆ  

ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ಸೇನಾಧೀಶ್ವರನಾದ ಯೆಹೋವನು ಉದ್ದೇಶಮಾಡಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು? ಎಂಬದೇ.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು;


ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.


ಅದಕ್ಕೆ ಬಿಳಾಮನು - ಯೆಹೋವನು ಆಜ್ಞಾಪಿಸುವದನ್ನೇ ನಾನು ಮಾಡಬೇಕೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.


ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.


ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು