Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:3 - ಕನ್ನಡ ಸತ್ಯವೇದವು J.V. (BSI)

3 ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:3
16 ತಿಳಿವುಗಳ ಹೋಲಿಕೆ  

ಬಿಳಾಮನು ಅವನಿಗೆ - ನೀನು ಇಲ್ಲೇ ಸರ್ವಾಂಗಹೋಮಮಾಡಿದ ಸ್ಥಳದಲ್ಲಿರು; ನಾನು ಅತ್ತಕಡೆ ಹೋಗಿ [ಯೆಹೋವನನ್ನು] ಎದುರುಗೊಳ್ಳುವೆನು ಎಂದು ಹೇಳಿದನು.


ಇಸ್ರಾಯೇಲ್ಯರಿಗೆ ಶುಭವಾಗಬೇಕೆಂಬದೇ ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನನೋಡುವದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ


ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.


ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು.


ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ -


ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯಜ್ಞಪೀಠದ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗ ಹೋಮವಾಗಿ ಸಮರ್ಪಿಸಿದಾಗ


ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ - ನಾನು ಆ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ ಎಂದು ಹೇಳಲಾಗಿ


ಅದಕ್ಕೆ ಬಿಳಾಮನು - ಯೆಹೋವನು ನುಡಿಸುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ ಅಂದನು.


ಅದಕ್ಕೆ ಬಿಳಾಮನು - ಯೆಹೋವನು ಆಜ್ಞಾಪಿಸುವದನ್ನೇ ನಾನು ಮಾಡಬೇಕೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.


ಆದರೆ ನಾನು ಆ ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು