Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:4 - ಕನ್ನಡ ಸತ್ಯವೇದವು J.V. (BSI)

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ - ನಾನು ಆ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:4
12 ತಿಳಿವುಗಳ ಹೋಲಿಕೆ  

ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಹೀಗೆ ಹೀಗೆ ಹೇಳಬೇಕು ಅಂದನು.


ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ವಾರಕ್ಕೆ ಎರಡಾವರ್ತಿ ಉಪವಾಸ ಮಾಡುತ್ತೇನೆ; ನಾನು ಸಂಪಾದಿಸುವ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ ಅಂದುಕೊಂಡನು.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು.


ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು - ಆ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿರುವದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು ಅಂದನು.


ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು -


ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು.


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿಹೋಗಿ ಹೀಗೆ ಹೀಗೆ ಹೇಳಬೇಕು ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು