Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:19 - ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:19
19 ತಿಳಿವುಗಳ ಹೋಲಿಕೆ  

ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು.


ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು