Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:23 - ಕನ್ನಡ ಸತ್ಯವೇದವು J.V. (BSI)

23 ಅವನು ಮತ್ತೂ ನುಡಿದದ್ದೇನಂದರೆ - ಅಯ್ಯೋ, ದೇವರು ಹೀಗೆ ಮಾಡುವಾಗ ಯಾರು ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಿಳಾಮನು ಮುಂದುವರೆದು ನುಡಿದದ್ದು ಏನೆಂದರೆ: ಅಯ್ಯೋ, ದೇವರೇ ಹೀಗೆ ಮಾಡುವಾಗ ಉಳಿಯುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಬಿಳಾಮನು ಹೀಗೆಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:23
5 ತಿಳಿವುಗಳ ಹೋಲಿಕೆ  

ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಯೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು