Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:3 - ಕನ್ನಡ ಸತ್ಯವೇದವು J.V. (BSI)

3 ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪವಾಗಿ ಇಂತೆಂದನು - ಬೆಯೋರನ ಮಗನಾದ ಬಿಳಾಮನಿಗುಂಟಾದ ದೇವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅವನು ದೇವರಾತ್ಮ ಪ್ರೇರಿತನಾಗಿ ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಪ್ರವಾದಿಸಿದನು: “ಇದು ಬೆಯೋರನ ಮಗ ಬಿಳಾಮನ ಪ್ರವಾದನೆ: ಸ್ಪಷ್ಟ ಕಣ್ಣುಳ್ಳವನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:3
9 ತಿಳಿವುಗಳ ಹೋಲಿಕೆ  

ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ, ದೇವರ ಮಾತುಗಳನ್ನು ಕೇಳುವವನೂ ಪರಾತ್ಪರನ ಜ್ಞಾನವನ್ನು ಪಡೆದವನೂ ಪರವಶವಾಗಿ ಕಣ್ಣುತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನಿಗುಂಟಾದ ದೇವೋಕ್ತಿ.


ಆಗ ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನು ನನ್ನನ್ನು ಅರಾವಿುನಿಂದ ಕರಿಸಿದನು; ಮೋವಾಬ್ಯರ ಅರಸನು ಮೂಡಲಬೆಟ್ಟಗಳಿಂದ ನನ್ನನ್ನು ಬರಮಾಡಿದನು. ನೀನು ಬಂದು ಯಾಕೋಬವಂಶದವರನ್ನು ನನಗೋಸ್ಕರ ಶಪಿಸಬೇಕು; ಇಸ್ರಾಯೇಲ್ಯರಿಗೆ ದುರ್ಗತಿಯುಂಟಾಗಲಿ ಎಂದು ಆಕ್ರೋಶಿಸಬೇಕು ಎಂದು ನನಗೆ ಹೇಳಿದನು.


ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಬಾಲಾಕನು - ಯೆಹೋವನು ಏನು ಹೇಳಿದ್ದಾನೆ ಎಂದು ಅವನನ್ನು ಕೇಳಲು ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನೇ, ಕಿವಿಗೊಟ್ಟು ಕೇಳು; ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.


ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು.


ಕೇಳು ಎಂದು ಹೇಳಿ ಪದ್ಯರೂಪವಾಗಿ ಇಂತೆಂದನು - ಬೆಯೋರನ ಮಗನಾದ ಬಿಳಾಮನಿಗುಂಟಾದ ದೇವೋಕ್ತಿ,


ತರುವಾಯ ಯೋಬನು ಮತ್ತೆ ಪ್ರಸ್ತಾಪವನ್ನೆತ್ತಿ ಇಂತೆಂದನು -


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು