Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:4 - ಕನ್ನಡ ಸತ್ಯವೇದವು J.V. (BSI)

4 ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:4
20 ತಿಳಿವುಗಳ ಹೋಲಿಕೆ  

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಅನಂತರದಲ್ಲಿ ನಾನು ಯೆರೂಸಲೇವಿುಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿ ಯೇಸುವನ್ನು ಕಂಡೆನು.


ಪೇತ್ರನು ಆ ದರ್ಶನದ ವಿಷಯದಲ್ಲಿ ಆಲೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ - ಅಗೋ, ಇಬ್ಬರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;


ಅವನು ಬಹಳ ಹಸಿದು ಊಟ ಮಾಡಬೇಕೆಂದಿದ್ದನು. ಊಟಕ್ಕೆ ಸಿದ್ಧವಾಗುತ್ತಿರುವಷ್ಟರಲ್ಲಿ


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ಅಲ್ಲಿಗೆ ಸೇರಿದ ಮೇಲೆ ಅವನೂ ತನ್ನ ಬಟ್ಟೆಗಳನ್ನು ತೆಗೆದು ಹಾಕಿ ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದದರಿಂದ - ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆಯುಂಟಾಯಿತು.


ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು - ಆ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿರುವದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು ಅಂದನು.


ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಭಯಭ್ರಾಂತನಾದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಯಾಕೋಬ್ಯರೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ; ಇಸ್ರಾಯೇಲ್ಯರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.


ಕೇಳು ಎಂದು ಹೇಳಿ ಪದ್ಯರೂಪವಾಗಿ ಇಂತೆಂದನು - ಬೆಯೋರನ ಮಗನಾದ ಬಿಳಾಮನಿಗುಂಟಾದ ದೇವೋಕ್ತಿ,


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು