Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:5 - ಕನ್ನಡ ಸತ್ಯವೇದವು J.V. (BSI)

5 ಯಾಕೋಬ್ಯರೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ; ಇಸ್ರಾಯೇಲ್ಯರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:5
13 ತಿಳಿವುಗಳ ಹೋಲಿಕೆ  

ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಉದ್ದವಾಗಿ ಚಾಚಿಕೊಂಡಿರುವ ತಗ್ಗುಗಳಂತೆಯೂ, ನದಿಯ ಬಳಿಯಲ್ಲಿರುವ ತೋಟಗಳಂತೆಯೂ ಕಾಣಿಸುತ್ತವೆ. ಯೆಹೋವನು ನೆಟ್ಟ ಅಗರು ಮರಗಳಿಗೂ ನೀರಿನ ಬಳಿಯಲ್ಲಿರುವ ದೇವದಾರು ವೃಕ್ಷಗಳಿಗೂ ಸಮಾನವಾಗಿವೆ.


ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.


ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು; ಸ್ವದೇಶಸ್ಥರಾದ ಇಸ್ರಾಯೇಲ್ಯರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.


ಅವನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲ್ಯರು ಅವನಿಗೆ ಕಾಣಿಸಿದರು.


ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.


ಆದರೆ ನಾನು ಆ ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.


ಯಾಕಂದರೆ ಅವರು ಇಸ್ರಾಯೇಲ್ಯರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವದಾಗಿ ಕಂಡು ಬಂತು.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ದೋಷವೂ ಇಲ್ಲ.


ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇವಿುನ ಹಾಗೆ ಮನೋಹರಿ ಪತಾಕಿನಿಯಂತೆ ಭಯಂಕರಿ!


ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು