ಅರಣ್ಯಕಾಂಡ 24:9 - ಕನ್ನಡ ಸತ್ಯವೇದವು J.V. (BSI)9 ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.” ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.