4 ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.
4 ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
4 ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
4 ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.
ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.
ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.
ದಿನತುಂಬಿದ ಮುದುಕನಾದ ಯೆಹೋಶುವನು ಇಸ್ರಾಯೇಲ್ಯರ ಹಿರಿಯರು, ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಇವರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ತನ್ನ ಬಳಿಗೆ ಕರಿಸಿ ಅವರಿಗೆ - ನಾನು ದಿನತುಂಬಿದ ಮುದುಕನಾಗಿದ್ದೇನೆ.
ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ
ಅವನು ಇಸ್ರಾಯೇಲ್ಯರೆಲ್ಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಿದನು.