Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:5 - ಕನ್ನಡ ಸತ್ಯವೇದವು J.V. (BSI)

5 ಆದಕಾರಣ ಮೋಶೆ ಇಸ್ರಾಯೇಲ್ಯರ ನ್ಯಾಯಾಧಿಪತಿಗಳಿಗೆ - ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳನಿಗೆ ಸೇರಿಕೊಂಡ ತನ್ನ ತನ್ನ ವಶದಲ್ಲಿರುವವರಿಗೆ ಪ್ರಾಣ ಶಿಕ್ಷೆಯನ್ನು ನಡಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನೂ ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನು ಪ್ರೋತ್ಸಾಹಿಸಿದವರನ್ನು ಕಂಡುಹಿಡಿದು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:5
12 ತಿಳಿವುಗಳ ಹೋಲಿಕೆ  

ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು;


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ಯೆಹೋವನೊಬ್ಬನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞಮಾಡುವವನನ್ನು ನಾಶಪಡಿಸಬೇಕು.


ಹೀಗೆ ಇಸ್ರಾಯೇಲ್ಯರು ಪೆಗೋರದ ಬಾಳನ ಭಕ್ತರಾದ ಹಾಗಾಯಿತು. ಆದದರಿಂದ ಅವರ ಮೇಲೆ ಯೆಹೋವನು ಕೋಪಗೊಂಡು ಮೋಶೆಗೆ -


ನಾವು ಪೆಗೋರದ ಸಂಗತಿಯಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ಅದು ಇನ್ನೂ ಶುದ್ಧವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು