Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:7 - ಕನ್ನಡ ಸತ್ಯವೇದವು J.V. (BSI)

7 ಕೂಡಲೆ ಮಾಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಯಲ್ಲಿ ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೂಡಲೆ ಮಹಾಯಾಜಕ ಆರೋನನ ಮೊಮ್ಮಗನೂ ಹಾಗು ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:7
12 ತಿಳಿವುಗಳ ಹೋಲಿಕೆ  

ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಫಿನೆಹಾಸನು ಎದ್ದು ಅವರನ್ನು ದಂಡಿಸಲು ಆ ವ್ಯಾಧಿಯು ನಿಂತುಹೋಯಿತು.


ಒಂದು ದಿವಸ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕೂತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು.


ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಕೊಲ್ಲಲ್ಪಟ್ಟರು.


ಆದರೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇವರ ಬಳಿಗೆ ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.


ನಾನು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ [ವಾಗ್ದಾನ ಮಾಡಿದ್ದು] ಜೀವ, ಸುಖ; ಅದರಂತೆ ಇವುಗಳನ್ನು ಅವರಿಗೆ ದಯಪಾಲಿಸಿದೆನು; [ಒಡಂಬಡಿಕೆಯಲ್ಲಿ ವಿಧಿಸಿದ್ದು] ಭಯಭಕ್ತಿ; ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಅಂಜಿದರು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು