Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:10 - ಕನ್ನಡ ಸತ್ಯವೇದವು J.V. (BSI)

10 ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:10
15 ತಿಳಿವುಗಳ ಹೋಲಿಕೆ  

ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.


ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;


ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.


ಮತ್ತು ಸಮೂಹದವರಲ್ಲಿ ಮುಖ್ಯಸ್ಥರಾಗಿಯೂ ಆಲೋಚನಾಕರ್ತರಾಗಿಯೂ ಹೆಸರುಗೊಂಡವರಾಗಿಯೂ ಇದ್ದ ಇನ್ನೂರೈವತ್ತುಮಂದಿ ಇಸ್ರಾಯೇಲ್ಯರೂ ಮೋಶೆಗೆ ವಿರೋಧವಾಗಿ ತಿರುಗಿಬಿದ್ದರು.


ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.


ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.


ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು [ತಿರುಗಿಬಿದ್ದಾಗ] ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲ್ಯರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಈ ಕಾರ್ಯಗಳನ್ನು ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುವದಿಲ್ಲ;


ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.


ಲೇವಿ ಕುಲಕ್ಕೂ ಒಂದು ಕೋಲು ಇರುವದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು