Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:20 - ಕನ್ನಡ ಸತ್ಯವೇದವು J.V. (BSI)

20 ಯೆಹೂದ ಕುಲದಲ್ಲಿ ಉಳಿದ ಕುಟುಂಬಗಳು ಯಾವವಂದರೆ - ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಚನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೂದ ಕುಲದಲ್ಲಿ ಉಳಿದ ಕುಟು೦ಬಗಳು ಇವು - ಶೆಲಹನಿ೦ದ ಶೇಲಾನ್ಯರು, ಪೆರೆಚನಿ೦ದ ಪೆರೆಚ್ಯರು, ಹಾಗು ಜೆರಹನಿ೦ದ ಜೆರಹಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:20
18 ತಿಳಿವುಗಳ ಹೋಲಿಕೆ  

ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;


ಯೆಹೂದನು ತಾಮಾರಳಲ್ಲಿ ಪೆರೆಚನನ್ನೂ ಜೆರಹನನ್ನೂ ಪಡೆದನು. ಪೆರೆಚನು ಹೆಚ್ರೋನನನ್ನು ಪಡೆದನು.


ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರರುವತ್ತೆಂಟು ಮಂದಿ.


ಯೆರೂಸಲೇವಿುನಲ್ಲಿ ಯೆಹೂದ ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು.) ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗನು; ಇವನು ಜೆಕರ್ಯನ ಮಗನು; ಇವನು ಅಮರ್ಯನ ಮಗನು; ಇವನು ಶೆಫಟ್ಯನ ಮಗನು; ಇವನು ಮಹಲಲೇಲನ ಮಗನು; ಇವನು ಪೆರೆಚ್ ಸಂತಾನದವನು.


ಯೆಹೂದನ ಮಗನಾದ ಶೇಲನ ಸಂತಾನದವರು - ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,


ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು.


ಆಮೇಲೆ ಯೆಹೂದನು - ಒಂದು ವೇಳೆ ಶೇಲಹನೂ ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ - ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರಮನೆಯಲ್ಲಿರು ಎಂದು ನೆವ ಹೇಳಿದನು. ಅವಳು ತೌರಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಅವಳು ಮತ್ತೊಂದು ಸಾರಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ಅದಕ್ಕೆ ಶೇಲಹನೆಂದು ಹೆಸರಿಟ್ಟಳು; ಅವಳು ಆ ಮಗುವನ್ನು ಹೆರುವಾಗ ಯೆಹೂದನು ಕಜೀಬೂರಿನಲ್ಲಿದ್ದನು.


ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದನ ಕುಲದವರಲ್ಲಿ ಹನ್ನೆರಡು ಸಾವಿರ,


ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.


ಪೆರೆಚನಿಂದುಂಟಾದ ಕುಟುಂಬಗಳು - ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.


[ಯೆಹೂದಕುಲದವರಲ್ಲಿ] - ಊತೈ, (ಇವನು ಅಮ್ಮೀಹೂದನ ಮಗನು; ಇವನು ಒವ್ರಿುಯ ಮಗನು; ಇವನು ಇವ್ರಿುಯ ಮಗನು; ಇವನು ಬಾನೀಯ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು)


ಶೇಲಾಹನ ಸಂತಾನದ ಚೊಚ್ಚಲನಾದ ಅಸಾಯ ಮತ್ತು ಅವನ ಮಕ್ಕಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು