ಅರಣ್ಯಕಾಂಡ 26:4 - ಕನ್ನಡ ಸತ್ಯವೇದವು J.V. (BSI)4 ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಿಸಿದರು. [ಅದರ ವಿವರ ಹೇಗಂದರೆ - ] ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಮೋಶೆಗೂ ಈಜಿಪ್ಟಿನಿಂದ ಬಂದಿದ್ದ ಇಸ್ರಯೇಲರಿಗೂ ಆಜ್ಞಾಪಿಸಿದ್ದಂತೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ಇಸ್ರಯೇಲರನ್ನು ಲೆಕ್ಕಿಸಿದರು: ಅದರ ವಿವರ ಇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು: ಅಧ್ಯಾಯವನ್ನು ನೋಡಿ |