Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:5 - ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲನ ಚೊಚ್ಚಲುಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವವಂದರೆ - ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.) ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:5
11 ತಿಳಿವುಗಳ ಹೋಲಿಕೆ  

ಇಸ್ರಾಯೇಲನ ಚೊಚ್ಚಲನಾದ ರೂಬೇನನ ಮಕ್ಕಳು - ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.


ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಅವರ ಗೋತ್ರಗಳ ಪ್ರಧಾನ ಪುರುಷರು. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನಿಗೆ ಹನೋಕ್ ಫಲ್ಲು ಹೆಚ್ರೋನ್ ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 46,500 ಮಂದಿ.


ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಿಸಿದರು. [ಅದರ ವಿವರ ಹೇಗಂದರೆ - ]


ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು