Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:53 - ಕನ್ನಡ ಸತ್ಯವೇದವು J.V. (BSI)

53 ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 “ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ನಾಡನ್ನು ಸ್ವಂತ ನಾಡಾಗಿ ಹಂಚಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 “ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:53
16 ತಿಳಿವುಗಳ ಹೋಲಿಕೆ  

ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಾಧಿಪತಿಗಳೂ


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -


ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂವಿುಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು