54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
ಆದರೆ ಯೋಸೇಫ್ಯರು ಯೆಹೋಶುವನಿಗೆ - ನೀನು ಚೀಟುಹಾಕಿ ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿದ್ದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ ಎಂದು ಹೇಳಲು
ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.