Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:55 - ಕನ್ನಡ ಸತ್ಯವೇದವು J.V. (BSI)

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:55
21 ತಿಳಿವುಗಳ ಹೋಲಿಕೆ  

ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ [ಯೊರ್ದನಿನ ಪಶ್ಚಿಮದ] ಕಾನಾನ್ ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರ ಒಂಭತ್ತುವರೆ ಕುಲದವರಿಗೆ ಸ್ವಾಸ್ತ್ಯವಾಗಿ ಹಂಚಿಕೊಟ್ಟರು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಚೀಟು ಏಳನೆಯ ಸಾರಿ ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವಾಸ್ತ್ಯವಾಗಿ ದೊರಕಿದ ಊರುಗಳು ಯಾವವಂದರೆ -


ಚೀಟು ಆರನೆಯ ಸಾರಿ ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು


ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವವಂದರೆ -


ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ದೇಶದಲ್ಲಿರುವ ಪಟ್ಟಣಗಳಾವವಂದರೆ -


ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು


ಚೀಟು ಎರಡನೆಯ ಸಾರಿ ಸಿಮೆಯೋನ್ ಕುಲದವರಿಗೆ ಬಿದ್ದಿತು. ಸಿಮೆಯೋನ್ ಕುಲದ ಗೋತ್ರಗಳ ಸ್ವಾಸ್ತ್ಯವು ಯೆಹೂದಕುಲದವರ ಸ್ವಾಸ್ತ್ಯದ ಮಧ್ಯದಲ್ಲಿತ್ತು.


ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.


ಆದರೆ ಯೋಸೇಫ್ಯರು ಯೆಹೋಶುವನಿಗೆ - ನೀನು ಚೀಟುಹಾಕಿ ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿದ್ದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ ಎಂದು ಹೇಳಲು


ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.


ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವಾಸ್ತ್ಯವನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದೂ ಅಪ್ಪಣೆ ಮಾಡಿದನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು