Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:64 - ಕನ್ನಡ ಸತ್ಯವೇದವು J.V. (BSI)

64 ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ಯರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಮೋಶೆ ಮತ್ತು ಯಾಜಕ ಆರೋನನು ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರ ಜನಗಣತಿ ಮಾಡಿದಾಗ ಎಣಿಕೆಯಾದವರಲ್ಲಿ ಒಬ್ಬರಾದರೂ ಇವರಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:64
10 ತಿಳಿವುಗಳ ಹೋಲಿಕೆ  

ಮತ್ತು ನಾಲ್ವತ್ತು ವರುಷ ಆತನು ಯಾರ ಮೇಲೆ ಬಹಳವಾಗಿ ಕೋಪಿಸಿಕೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ.


ಆದರೂ ಅವರೊಳಗೆ ಬಹುಮಂದಿಯ ವಿಷಯದಲ್ಲಿ ದೇವರು ಸಂತೋಷಿಸಲಿಲ್ಲ. ಅವರು ಅಡವಿಯಲ್ಲಿ ಸಂಹರಿಸಲ್ಪಟ್ಟರೆಂದು ಬರೆದದೆಯಷ್ಟೆ.


ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು].


ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ; ನಿಮ್ಮೆಲ್ಲರ ಶವಗಳು ಈ ಅರಣ್ಯದಲ್ಲಿ ಬೀಳುವ ಪರ್ಯಂತರ


ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ಯರ ಜನಸಂಖ್ಯೆ ನೋಡಿದಾಗ ಲೆಕ್ಕಿಸಲ್ಪಟ್ಟವರು ಇವರೇ.


ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.


ಯೆಹೋಶುವನು ಸುನ್ನತಿಮಾಡಿದ್ದಕ್ಕೆ ಕಾರಣವೇನಂದರೆ - ಐಗುಪ್ತದಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲಾ ಆ ದೇಶವನ್ನು ಬಿಟ್ಟನಂತರ ಅರಣ್ಯದಲ್ಲಿ ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು