ಅರಣ್ಯಕಾಂಡ 27:14 - ಕನ್ನಡ ಸತ್ಯವೇದವು J.V. (BSI)14 ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು. ಅಧ್ಯಾಯವನ್ನು ನೋಡಿ |