Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:17 - ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅವರ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನಾಯಕನಾಗಿ ಅವರ ಮುಂದೆ ಹೊರಡುವದಕ್ಕೂ ಅವರನ್ನು ಹಿಂದಕ್ಕೆ ಕರಕೊಂಡು ಬರುವದಕ್ಕೂ ಒಬ್ಬ ಪುರುಷನನ್ನು ನೇವಿುಸಬೇಕೆಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:17
19 ತಿಳಿವುಗಳ ಹೋಲಿಕೆ  

ಕುರುಬರು ಇರಲಿಲ್ಲವಾದದರಿಂದ ಅವು ಚದರಿಹೋದವು; ದಿಕ್ಕಾಪಾಲಾಗಿ ಕಾಡಿನ ಸಕಲಮೃಗಗಳಿಗೆ ತುತ್ತಾದವು;


ಆತನು ಹೊರಗೆ ಬಂದು ಬಹುಜನರ ಗುಂಪನ್ನು ಕಂಡು ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಬಹಳ ಉಪದೇಶ ಮಾಡುತ್ತಿದ್ದನು.


ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.


ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು.


ಅವನು ಅವರಿಗೆ - ನಾನು ಈಗ ನೂರಿಪ್ಪತ್ತು ವರುಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವದು ಇನ್ನು ನನ್ನಿಂದಾಗದು; ಯೆಹೋವನು ನನಗೆ - ನೀನು ಈ ಯೊರ್ದನ್ ಹೊಳೆಯನ್ನು ದಾಟಕೂಡದೆಂದು ಆಜ್ಞಾಪಿಸಿದ್ದಾನೆ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇವಿುಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು;


ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇವಿುಸಿದನು; ಇವನು ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದನು.


ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು ಎಂದು ಹೇಳಿದರು.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೆ ಹೋಗಿರಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.


ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು, ಇದೇ ನನ್ನ ಅಪ್ಪಣೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು