Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:2 - ಕನ್ನಡ ಸತ್ಯವೇದವು J.V. (BSI)

2 ಅವರು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರು ಇವರೆಲ್ಲರ ಮುಂದೆ ನಿಂತು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:2
10 ತಿಳಿವುಗಳ ಹೋಲಿಕೆ  

ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -


ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾಎಂಬವರು ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವದಕ್ಕೆ ಬಂದರು.


ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಬಳಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳ ಬಳಿಗೂ ಬಂದು -


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು